ಮತ್ತಾಯನು 17:11

ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;

ಸಂದರ್ಭದೊಂದಿಗೆ ಓದಿ · ಮತ್ತಾಯನು 17

9ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.

10ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.

11ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;

12ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

13ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.

ಮತ್ತಾಯನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी