ಯೆಹೆಜ್ಕೇಲನು 16:46

ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್‌ ನಿನ್ನ ತಂಗಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

44ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು.

45ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.

46ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್‌ ನಿನ್ನ ತಂಗಿ.

47ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.

48ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी