ಪ್ರಲಾಪಗಳು 1:8

ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 1

6ಚೀಯೋನಿನ ಮಗಳ ಎಲ್ಲಾ ಸೌಂದರ್ಯವು ಅವಳನ್ನು ಬಿಟ್ಟು ಹೋಯಿತು. ಅವಳ ಪ್ರಧಾನರು ಮೇವು ಕಾಣದ ಜಿಂಕೆಗಳ ಹಾಗಾದರು. ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಹೋದರು.

7ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.

8ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.

9ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.

10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.

ಪ್ರಲಾಪಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी