೨ ಸಮುವೇಲನು 6:5

ದಾವೀದನೂ ಇಸ್ರಾಯೇಲ್‌ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 6

3ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು.

4ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು.

5ದಾವೀದನೂ ಇಸ್ರಾಯೇಲ್‌ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.

6ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.

7ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.

೨ ಸಮುವೇಲನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी