೧ ಸಮುವೇಲನು 20:25

ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 20

23ನಾನೂ ನೀನೂ ಮಾತನಾಡಿಕೊಂಡ ಈ ಕಾರ್ಯಕ್ಕೆ ಇಗೋ, ಕರ್ತನು ನನಗೂ ನಿನಗೂ ಮಧ್ಯೆ ಎಂದೆಂದಿಗೂ ಸಾಕ್ಷಿಯಾಗಿ ಇರುವನು ಅಂದನು.

24ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟು ಕೊಂಡಿದ್ದನು. ಅಮಾವಾಸ್ಯೆ ಆದಾಗ ಅರಸನು ಭೋಜನವನ್ನು ಮಾಡಲು ಕುಳಿತನು.

25ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು.

26ದಾವೀದನು ಇರುವ ಸ್ಥಳವು ಬರಿದಾಗಿತ್ತು. ಆದಾಗ್ಯೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿದ್ದಾನೆ, ನಿಶ್ಚಯವಾಗಿ ಅಶುಚಿಯಾಗಿದ್ದಾನೆ ಎಂದು ಅಂದುಕೊಂಡನು.

27ಅಮಾವಾ ಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡ್ರುವ ಸ್ಥಳವು ಹಾಗೆಯೇ ಬರಿದಾಗಿತ್ತು; ಆದದರಿಂದ ಸೌಲನುಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಕುಮಾರನಾದ ಯೋನಾ ತಾನನನ್ನು ಕೇಳಿದನು.

೧ ಸಮುವೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी