ಮಾರ್ಕನು 7:27

ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 7

25ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.

26ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು.

27ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.

28ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.

29ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.

ಮಾರ್ಕನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी