ಆಮೋಸ 6:9

ಆಗುವದೇನಂದರೆ, ಒಂದು ಮನೆಯಲ್ಲಿ ಹತ್ತು ಜನರು ಉಳಿದರೆ ಅವರು ಸಾಯುವರು.

ಸಂದರ್ಭದೊಂದಿಗೆ ಓದಿ · ಆಮೋಸ 6

7ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.

8ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.

9ಆಗುವದೇನಂದರೆ, ಒಂದು ಮನೆಯಲ್ಲಿ ಹತ್ತು ಜನರು ಉಳಿದರೆ ಅವರು ಸಾಯುವರು.

10ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.

11ಇಗೋ, ಕರ್ತನು ಆಜ್ಞಾಪಿಸುತ್ತಾನೆ; ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.

ಆಮೋಸ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी