ಮತ್ತಾಯನು 17:22

ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 17

20ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.

21ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.

22ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.

23ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.

24ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.

ಮತ್ತಾಯನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी