ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
20ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.
21ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.
22ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
23ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.
24ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ