೧ ಕೊರಿಂಥದವರಿಗೆ 13:10

ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 13

8ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.

9ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.

10ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.

11ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು.

12ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.

೧ ಕೊರಿಂಥದವರಿಗೆ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी