ಚೆಫನ್ಯ 2:9

ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.

ಸಂದರ್ಭದೊಂದಿಗೆ ಓದಿ · ಚೆಫನ್ಯ 2

7ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.

8ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.

9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.

10ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ

11ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.

ಚೆಫನ್ಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी