ಯಾಕೋಬನು ಓಡಿಹೋದನೆಂದು ಮೂರ ನೆಯ ದಿವಸದಲ್ಲಿ ಲಾಬಾನನಿಗೆ ತಿಳಿಸಲ್ಪಟ್ಟಿತು.
20ಆದರೆ ಯಾಕೋಬನು ತಾನು ಓಡಿ ಹೋಗುವದನ್ನು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಕಳ್ಳತನದಿಂದ ಹೋದನು.
21ಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು.
22ಯಾಕೋಬನು ಓಡಿಹೋದನೆಂದು ಮೂರ ನೆಯ ದಿವಸದಲ್ಲಿ ಲಾಬಾನನಿಗೆ ತಿಳಿಸಲ್ಪಟ್ಟಿತು.
23ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.
24ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ