ಲೆಬನೋನಿಗೆ ಹೋಗಿ ಕೂಗು, ಬಾಶಾನಿನಲ್ಲಿ ನಿನ್ನ ಸ್ವರವನ್ನೆತ್ತು, ದಾರಿಗಳಲ್ಲಿ ಕೂಗು, ನಿನ್ನ ಪ್ರಿಯರು ನಾಶವಾಗಿದ್ದಾರೆ.
18ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
19ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
20ಲೆಬನೋನಿಗೆ ಹೋಗಿ ಕೂಗು, ಬಾಶಾನಿನಲ್ಲಿ ನಿನ್ನ ಸ್ವರವನ್ನೆತ್ತು, ದಾರಿಗಳಲ್ಲಿ ಕೂಗು, ನಿನ್ನ ಪ್ರಿಯರು ನಾಶವಾಗಿದ್ದಾರೆ.
21ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ.
22ನಿನ್ನ ಕುರುಬರನ್ನೆಲ್ಲಾ ಗಾಳಿ ತಿಂದುಬಿಡುವದು; ನಿನ್ನ ಪ್ರಿಯರು ಸೆರೆಗೆ ಹೋಗುವರು; ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ ಅವಮಾನವೂ ಆಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ