ಯೆರೆಮಿಯ 10:11

ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 10

9ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.

10ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.

11ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.

12ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;

13ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.

ಯೆರೆಮಿಯ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी