ಅರಣ್ಯಕಾಂಡ 5:17

ಆಗ ಯಾಜಕನು ಪವಿತ್ರ ವಾದ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದು ಕೊಳ್ಳಬೇಕು; ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತಕ್ಕೊಂಡು ಆ ನೀರಿನೊಳಗೆ ಹಾಕಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 5

15ಆ ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.

16ಯಾಜಕನು ಅವಳನ್ನು ಸವಿಾಪಕ್ಕೆ ಕರೆದು ಕರ್ತನ ಸಮ್ಮುಖದಲ್ಲಿ ನಿಲ್ಲಿಸಬೇಕು.

17ಆಗ ಯಾಜಕನು ಪವಿತ್ರ ವಾದ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದು ಕೊಳ್ಳಬೇಕು; ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತಕ್ಕೊಂಡು ಆ ನೀರಿನೊಳಗೆ ಹಾಕಬೇಕು.

18ಯಾಜಕನು ಆ ಸ್ತ್ರೀಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಿ ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು ಅವಳ ಕೈಗಳಲ್ಲಿ ರೋಷದ ಕಾಣಿಕೆಯಾಗಿರುವ ಜ್ಞಾಪಕದ ಕಾಣಿಕೆಯನ್ನು ಇಡಬೇಕು. ಆದರೆ ಯಾಜಕನ ಕೈಯಲ್ಲಿ ಶಪಿಸುವಂತ ಕಹಿಯಾದ ನೀರು ಇರಬೇಕು.

19ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು.

ಅರಣ್ಯಕಾಂಡ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी