ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.
15ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
16ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು.
17ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.
18ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
19ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ