ಅರಣ್ಯಕಾಂಡ 26:62

ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್‌ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್‌ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 26

60ಆರೋನನಿಗೆ ನಾದಾಬ್‌ ಅಬೀಹೂ ಎಲ್ಲಾಜರನೂ ಈತಾಮಾರ್‌ ಹುಟ್ಟಿದರು.

61ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.

62ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್‌ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್‌ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.

63ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್‌ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್‌ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.

64ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್‌ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.

ಅರಣ್ಯಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी