ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
3ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
4ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
5ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
6ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
7ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ