ಪ್ರಕಟನೆ 21:4

ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 21

2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.

3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ

4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.

5ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.

6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.

ಪ್ರಕಟನೆ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी