೨ ಪೂರ್ವಕಾಲವೃತ್ತಾಂತ 34:31

ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 34

29ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು.

30ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು.

31ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.

32ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.

33ಹೀಗೆಯೇ ಯೋಷೀಯನು ಇಸ್ರಾಯೇಲ್‌ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.

೨ ಪೂರ್ವಕಾಲವೃತ್ತಾಂತ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी