ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ.
7ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.
8ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.
9ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ.
10ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.
11ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ