ಇಬ್ರಿಯರಿಗೆ 11:36

ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 11

34ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.

35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.

36ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.

37ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.

38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.

ಇಬ್ರಿಯರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी