ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.
8ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
9ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.
10ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.
11ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು.
12ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ