ವಿಮೋಚನಕಾಂಡ 3:8

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 3

6ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.

7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.

8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.

9ಆದದರಿಂದ ಈಗ ಕೇಳು, ಇಸ್ರಾಯೇಲ್‌ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.

10ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್‌ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.

ವಿಮೋಚನಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी