ವಿಮೋಚನಕಾಂಡ 19:14

ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 19

12ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು.

13ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು.

14ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.

15ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.

16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.

ವಿಮೋಚನಕಾಂಡ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी