೨ ಅರಸುಗಳು 15:10

ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 15

8ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು.

9ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

10ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.

11ಇಗೋ, ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

12ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು.

೨ ಅರಸುಗಳು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी