ಯೆಹೆಜ್ಕೇಲನು 7:2

ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್‌ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 7

1ಇದಾದ ಮೇಲೆ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನೆಂದರೆ--

2ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್‌ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.

3ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.

4ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.

ಯೆಹೆಜ್ಕೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी