ಪ್ರಕಟನೆ 21:23

ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 21

21ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.

22ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ.

23ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.

24ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.

25ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ.

ಪ್ರಕಟನೆ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी