ಯಾಜಕಕಾಂಡ 7:32

ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 7

30ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.

31ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.

32ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.

33ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.

34ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.

ಯಾಜಕಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी