ಧರ್ಮೋಪದೇಶಕಾಂಡ 31:19

ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್‌ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್‌ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 31

17ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.

18ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.

19ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್‌ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್‌ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು.

20ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.

21ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.

ಧರ್ಮೋಪದೇಶಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी