ಆದಿಕಾಂಡ 31:9

ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು ಅವುಗಳನ್ನು ನನಗೆ ಕೊಟ್ಟಿದ್ದಾನೆ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 31

7ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.

8ನಿಮ್ಮ ತಂದೆ ನನಗೆ --ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ಚುಕ್ಕೆಯುಳ್ಳದ್ದೇ ಈಯಿತು; ಅವನು --ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ರೇಖೆಯುಳ್ಳದ್ದನ್ನೇ ಈಯಿತು.

9ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು ಅವುಗಳನ್ನು ನನಗೆ ಕೊಟ್ಟಿದ್ದಾನೆ.

10ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು.

11ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.

ಆದಿಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी