ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ.
19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.
20ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು.
21ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ.
22ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
23ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ