ಯೆರೆಮಿಯ 51:36

ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;

ಸಂದರ್ಭದೊಂದಿಗೆ ಓದಿ · ಯೆರೆಮಿಯ 51

34ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.

35ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.

36ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;

37ಬಾಬೆಲ್‌ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.

38ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು, ಸಿಂಹದ ಮರಿಗಳ ಹಾಗೆ ಶಬ್ದ ಮಾಡುವರು.

ಯೆರೆಮಿಯ 51 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी