೨ ಸಮುವೇಲನು 7:19

ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 7

17ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.

18ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?

19ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?

20ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ?

21ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ಈ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ.

೨ ಸಮುವೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी