ದಾನಿಯೇಲನು 1:19

ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 1

17ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.

18ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.

19ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು.

20ಅರಸನು ಅವರ ಹತ್ತಿರ ವಿಚಾರಿಸಿದ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರ ರಿಗಿಂತಲೂ ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡರು.

21ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.

ದಾನಿಯೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी