ಯೋಬನು 2:10

ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.

ಸಂದರ್ಭದೊಂದಿಗೆ ಓದಿ · ಯೋಬನು 2

8ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.

9ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.

10ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.

11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.

12ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.

ಯೋಬನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी