ಆದಿಕಾಂಡ 37:2

ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 37

1ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್‌ ದೇಶದಲ್ಲಿ ವಾಸ ವಾಗಿದ್ದನು.

2ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.

3ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.

4ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.

ಆದಿಕಾಂಡ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी