ಅಪೊಸ್ತಲರ ಕೃತ್ಯಗಳು 8:12

ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 8

10ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.

11ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.

12ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.

13ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.

14ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.

ಅಪೊಸ್ತಲರ ಕೃತ್ಯಗಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी