ಜೆಕರ್ಯ 12:4

ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.

ಸಂದರ್ಭದೊಂದಿಗೆ ಓದಿ · ಜೆಕರ್ಯ 12

2ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ

3ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.

4ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.

5ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು.

6ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.

ಜೆಕರ್ಯ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी