ಧರ್ಮೋಪದೇಶಕಾಂಡ 10:12

ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 10

10ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.

11ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.

12ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ

13ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?

14ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.

ಧರ್ಮೋಪದೇಶಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी