೨ ಪೂರ್ವಕಾಲವೃತ್ತಾಂತ 19:8

ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 19

6ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.

7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.

8ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--

9ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು.

10ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.

೨ ಪೂರ್ವಕಾಲವೃತ್ತಾಂತ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी