ಹೀಗಿದ್ದರೂ ಸೀಲನಿಗೆ ಅಲ್ಲಿಯೇ ಇನ್ನೂ ಇರುವದು ಉಚಿತವೆಂದು ತೋಚಿತು.
32ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
33ಅಲ್ಲಿ ಕೆಲವು ಕಾಲ ಕಳೆದ ನಂತರ ಸಮಾಧಾನದಿಂದ ಅಪೊಸ್ತಲರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದು ಕೊಂಡರು.
34ಹೀಗಿದ್ದರೂ ಸೀಲನಿಗೆ ಅಲ್ಲಿಯೇ ಇನ್ನೂ ಇರುವದು ಉಚಿತವೆಂದು ತೋಚಿತು.
35ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
36ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ