೨ ಪೂರ್ವಕಾಲವೃತ್ತಾಂತ 13:13

ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 13

11ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.

12ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.

13ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು.

14ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.

15ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.

೨ ಪೂರ್ವಕಾಲವೃತ್ತಾಂತ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी