ಮತ್ತಾಯನು 5:34

ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.

ಸಂದರ್ಭದೊಂದಿಗೆ ಓದಿ · ಮತ್ತಾಯನು 5

32ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.

33ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.

34ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.

35ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.

36ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ.

ಮತ್ತಾಯನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी