ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು.
1ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
2ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.
3ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು.
4ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
5ಒಣಗಿದ ಸ್ಥಳದಲ್ಲಿನ ಬಿಸಿಲಿನ ಹಾಗೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಅವರ ಭೀಕರತೆಯನ್ನು ಕೀಳು ಸ್ಥಿತಿಗೆ ತರುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ