ಅರಣ್ಯಕಾಂಡ 6:21

ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 6

19ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ ಆ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಆ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು.

20ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು.

21ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು.

22ಇದಲ್ಲದೆ ಕರ್ತನು ಮೋಶೆಯ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--

23ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು.

ಅರಣ್ಯಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी