ಎಜ್ರನು 10:6

ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.

ಸಂದರ್ಭದೊಂದಿಗೆ ಓದಿ · ಎಜ್ರನು 10

4ನೀನು ಏಳು; ಯಾಕಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ಇರುವೆವು; ಧೈರ್ಯದಿಂದಿರು, ಅದನ್ನು ಮಾಡು ಅಂದರು.

5ಆಗ ಎಜ್ರನು ಎದ್ದು, ಪ್ರಧಾನಯಾಜಕರೂ ಲೇವಿಯರೂ ಸಮಸ್ತ ಇಸ್ರಾ ಯೇಲ್ಯರೂ ಈ ಮಾತಿನ ಪ್ರಕಾರವಾಗಿ ಮಾಡಲು ಅವರು ಆಣೆ ಇಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.

6ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.

7ಆಗ ಸೆರೆಯ ಮಕ್ಕಳೆಲ್ಲರೂ ಯೆರೂಸಲೇಮಿಗೆ ಕೂಡಿ ಬರಬೇಕೆಂದು ಯೆಹೂದ ಮತ್ತು ಯೆರೂಸ ಲೇಮಿನಲ್ಲಿ ಎಲ್ಲೆಲ್ಲಿಯೂ ಪ್ರಕಟಿಸಿದರು.

8ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.

ಎಜ್ರನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी