ಇಬ್ರಿಯರಿಗೆ 12:9

ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 12

7ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ?

8ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ.

9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?

10ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.

11ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.

ಇಬ್ರಿಯರಿಗೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी