೨ ಸಮುವೇಲನು 19:35

ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 19

33ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.

34ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?

35ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?

36ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು?

37ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು.

೨ ಸಮುವೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी