ಯೆಶಾಯ 66:10

ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 66

8ಇಂಥಾದ್ದನ್ನು ಯಾರು ಕೇಳಿದ್ದಾರೆ? ಇಂಥವುಗಳನ್ನು ಯಾರು ನೋಡಿದ್ದಾರೆ? ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ? ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ? ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು.

9ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ.

10ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.

11ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ.

12ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,

ಯೆಶಾಯ 66 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी